ಕಾಪು : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ರೈತ ಮೋರ್ಚಾ ವತಿಯಿಂದ ಇಂದು ರಂದು ಕಾಪು ಮಂಡಲ ಬಿಜೆಪಿ ಕಚೇರಿಯ ಬಳಿ “ಬೃಹತ್ ಪ್ರತಿಭಟನೆ” ಆಯೋಜಿಸಲಾಯಿತು.
ಪ್ರತಿಭಟನೆ ಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ದಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದೇವಿ ತೀರ್ಥರಾಮ್, ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಉಪಾಧ್ಯಕ್ಷರಾದ ಸುರೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಧೀರಜ್, ಗೋಪಾಲ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಗುರುನಂದನ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಶೆಟ್ಟಿ, ಕೇಶವ ಕೋಟ್ಯಾನ್, ರಾಜ್ಯ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳಾದ ರಾಘವೇಂದ್ರ ಉಪ್ಪೂರು, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.