ಕಾಜಾರಗುತ್ತು : ಸೆಪ್ಟೆಂಬರ್ : 11: ದೃಶ್ಯ ನ್ಯೂಸ್ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಜಾರಗುತ್ತು ಇದರ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಇಂದು ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ನೂತನ ಕಾರ್ಯಕ್ರಮ ಸಸಿ ನೆಟ್ಟು ಪೋಷಿಸುವ “ಸಸ್ಯ ಶ್ಯಾಮಲ” ಕಾರ್ಯಕ್ರಮ ಆಯೋಜಿಸಲಾಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗಿಡ ನೆಡುವ ಮೂಲಕ “ಸಸ್ಯ ಶ್ಯಾಮಲ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವಿಷ್ಣುಮೂರ್ತಿ ಶೌಡೆ, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾದ ದೇವೇಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಡಯಟ್ ನ ಜ್ಞಾನವಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.