ಕಾಜಾರಗುತ್ತು : ಸೆಪ್ಟೆಂಬರ್ 11: ದೃಶ್ಯ ನ್ಯೂಸ್ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಜಾರಗುತ್ತು ಇದರ ನೂತನ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಜಾರಗುತ್ತು ನೂತನ ಕೊಠಡಿಯ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶ್ಲಾಘನೀಯ ಇಂತಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು ಅವರು ಶಾಸಕನ ನೆಲೆಯಲ್ಲಿ ಶಾಲೆಗೆ ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವಿಷ್ಣುಮೂರ್ತಿ ಶೌಡೆ, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾದ ದೇವೇಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಡಯಟ್ ನ ಜ್ಞಾನವಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.