ಚಿಕ್ಕಮಗಳೂರು, ಸೆ.12: ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂಭತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮತ್ತು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಬೇಲನಹಳ್ಳಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಇದರ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳುಗಳು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ.
ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.