ಅಜೆಕಾರು : ಮರ್ಣೆ ಗ್ರಾಮದ ಅಜೆಕಾರು ಜುಮ್ಮಾ ಮಸೀದಿಯ ಬಳಿ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ರಚನ್ ಎಂಬವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಿರಣ್ ಕುಮಾರ್ ಪಿ. (29) ಕಾರಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಬೈಕ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಿರುಸಿಗೆ ಎರಡೂ ವಾಹನಗಳು ಜಖಂಗೊಂಡಿವೆ. ಬೈಕ್ ಸವಾರ ರಚನ್ ಗಾಯಗೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.