ಉಡುಪಿ : ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇವಲ ಒಂದೇ ವಾರದಲ್ಲಿ 160 ಪ್ರಕರಣಗಳು ದಾಖಲಾಗಿವೆ.
ಕಳೆದ ಕೆಲವು ದಿನಗಳ ಹಿಂದೆ 189 ಪ್ರಕರಣಗಳಿದ್ದರೆ ಈಗ ಅದರ ಸಂಖ್ಯೆ 350ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.
ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ಬಿಸಿಲು ಮಳೆ ಯಿಂದಾಗಿ ಸೊಳ್ಳೆ ಉತ್ಪತ್ನಿ ಹೆಚ್ಚಾಗಿ ಜೂನ್ ತಿಂಗಳಿನಿಂದ ಪ್ರಕರಣಗಳು ಜಾಸ್ತಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.