ಉಡುಪಿ : ಸೆಪ್ಟೆಂಬರ್ 12: ಕರ್ನಾಟಕ ರಕ್ಷಣಾ ವೇದಿಕೆ (ರಿ.) ವತಿಯಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಗೌರವಾಧ್ಯಕ್ಷರಾದ ಸುಂದರ್. ಎ. ಬಂಗೇರ, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಳ , ಜಿಲ್ಲಾ ಉಪಾಧ್ಯಕ್ಷರಾದ ಕುಶಲ ಅಮಿನ್, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಕೃಷ್ಣಕುಮಾರ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ, ಸಹ ಸಂಘಟನಾ ಕಾರ್ಯದರ್ಶಿಯಾದ ಲಕ್ಷ್ಮೀಬಾಯಿ ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.