ಉಡುಪಿ : ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ನಿನ್ನೆ ವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.