ಉಡುಪಿ : ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಶೀಲನೆ ನಡೆಸಿ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.
ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ ಬೀಳುವ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕು ಗಳನ್ನು ಬರಪೀಡಿತ ತಾಲೂಕು ಎಂಬುದಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ.
ತರಬೇತಿ ಪಡೆದ ತಂಡವು ಅಲ್ಲಿನ ಮಳೆ ಪ್ರಮಾಣ, ಮಣ್ಣಿನ ಶುಷ್ಕತೆ ಸೇರಿದಂತೆ ಎಲ್ಲವನ್ನು ಪರಿಶೀಲನೆ ಮಾಡಿ ಮೊಬೈಲ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ.
ಮುಂದೆ ರಾಜ್ಯ ಸರಕಾರ ಈ ವರದಿಯನ್ನು ಆಧಾರಿಸಿ ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ತಿಳಿಸಿದರು.
ಉಡುಪಿ ಜಿಲ್ಲೆಗೆ ಈವರೆಗೆ ನೆರೆ ಪರಿಹಾರ ನಿಧಿ ಬಿಡುಗಡೆಯಾಗಿಲ್ಲ. ಸಣ್ಣ ಪುಟ್ಟ ಹಾನಿಗೆ ಸಂಬಂಧಿಸಿ ಪ್ರಾಕೃತಿಕ ವಿಕೋಪ ನಿಧಿಯಿಂದ ಪರಿಹಾರವನ್ನು ನೀಡಲಾಗುತ್ತದೆ. 2ಲಕ್ಷ ರೂ.ವರೆಗಿನ ಮನೆ, ಶಾಲೆ, ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಯನ್ನು ನಡೆಸಲಾಗಿದೆ. ದೊಡ್ಡ ಹಾನಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.