ಉಡುಪಿ: ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು
ಸಭೆಯನ್ನು ಉದ್ದೇಶಸಿ ಮಾತನಾಡಿದ ಶಾಸಕರು ಡೆಂಗ್ಯೂ ರೋಗ ತಡೆಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೇ ನೀಡಿದರು.
ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದು ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯ ಇದ್ದು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ರವೀಂದ್ರ, ಉಡುಪಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ವಿಜಯ ಮತ್ತು ಉಡುಪಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.