⭕️MDMA ಮಾರಾಟ – ಅಬ್ದುಲ್ ಸವಾಜ್ ಬಂಧನ
ಮಂಗಳೂರು: ಸೆ.13: ದೃಶ್ಯ ನ್ಯೂಸ್ : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನ್ನು ಉಳ್ಳಾಲ ನಿವಾಸಿ ಅಬ್ದುಲ್ ಸವಾಜ್ ಚವ್ವಾ(30) ಎಂದು ಗುರುತಿಸಲಾಗಿದೆ.
ಬಂಧಿತನಿಂದ 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾತ್ರವಲ್ಲದೇ ಆರೋಪಿಯಿಂದ ಮಾದಕವಸ್ತು ಮಾರಾಟಕ್ಕೆ ಬಳಸಲಾದ ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್-1, ನಗದು ರೂ. 2120/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000/- ಆಗಬಹುಡುಗಿ ಎಂದು ಅಂದಾಜಿಸಲಾಗಿದೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಮುಂದುವರಿದಿದೆ.