ಮಂಗಳೂರು : ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ನಗರದ ಬಿಜೈನಲ್ಲಿರುವ ಅಪಾರ್ಟ್‌ಮೆಂಟ್ ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷ ಪ್ರಾಯದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಯೊಂದಿಗೆ ನೆಲೆಸಿರುವ ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಇದೀಗ ವಿದ್ಯಾರ್ಥಿನಿ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ವಿದ್ಯಾರ್ಥಿಯ ತಾಯಿ ನೀಡಿದ ದೂರಿನಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.