ಕಾಪು : ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಇಂದು ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, ಗೂಡ್ಸ್ ವಾಹನಗಳಿಗೆ ಲೈಫ್ ಟ್ಯಾಕ್ಸ್, ಜಿ. ಪಿ. ಎಸ್ ಅಳವಡಿಕೆ ಹಾಗೂ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ವಾಹನಗಳಿಗೆ ಏಕಾಏಕಿಯಾಗಿ ಪರವಾನಿಗೆಯನ್ನು ಕಡ್ಡಾಯಗೊಳಿಸಿರುವುದರಿಂದಈ ವ್ಯವಸ್ಥೆಯಲ್ಲಿ ದುಡಿಯುತ್ತಿರುವವರು ಸಂಕಷ್ಟಕ್ಕೆ ಒಳಗಾಗುವುದರಿಂದ ರಾಜ್ಯ ಸರ್ಕಾರ ತಕ್ಷಣದಲ್ಲಿ ಈ ನೀತಿಯನ್ನು ಹಿಂಪಡೆಯುವಂತೆ ಒತ್ತಾಯಿಸುವ ಕುರಿತು ಚರ್ಚಿಸಲಾಯಿತು.
ಈ ಕುರಿತು ಧ್ವನಿ ಎತ್ತಿದ ಶಾಸಕರು ಕೂಡಲೇ ಸದ್ರಿ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.