ಉಡುಪಿ : ಸೆಪ್ಟೆಂಬರ್ 13 : ದೃಶ್ಯ ನ್ಯೂಸ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ,ಮಕ್ಕಳ ಸಹಾಯವಾಣಿ ಕೇಂದ್ರ ಹಾಗೂ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಜಂಟಿ ಸಹಯೋಗದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣಾ ಕಾರ್ಯಾಚರಣೆಯನ್ನು ಮಲ್ಪೆ ಬಂದರಿನಲ್ಲಿ ಹಮ್ಮಿಕೊಳ್ಳಲಾಯಿತು.
ಶಾಲೆಯಿಂದ ಹೊರಗುಳಿದು ವಿದ್ಯಾಭ್ಯಾಸದಿಂದ ವಂಚಿತರಾಗಿ ಮೀನು ಆಯುವ ಕೆಲಸದಲ್ಲಿ ತೊಡಗಿದ್ದ 3 ಬಾಲಕಾರ್ಮಿಕ ಮಕ್ಕಳು ಹಾಗೂ ಮಗುವನ್ನು ಹಿಡಿದುಕೊಂಡು ಭಿಕ್ಷೆ ಬೇಡುತಿದ್ದ ಇಬ್ಬರು
ತಾಯಿ ಮಗುವನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಯಿತು.
ಮಕ್ಕಳ ಕಲ್ಯಾಣ ಸಮಿತಿ ಯವರ ಆದೇಶದಂತೆ ಒಬ್ಬ ಬಾಲಕನಿಗೆ ಬಾಲಕರ ಬಾಲಮಂದಿರ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಬಾಲಕಿಯರ ಬಾಲಮಂದಿರದಲ್ಲಿ ಪುನರ್ ವಸತಿಯನ್ನು ಕಲ್ಪಿಸಲಾಯಿತು.
ಇಬ್ಬರು ತಾಯಿ ಮಗುವನ್ನು ಸಮಾಜ ಕಲ್ಯಾಣ ಇಲಾಖೆ ಯವರ ವಶಕ್ಕೆ ಒಪ್ಪಿಸಲಾಯಿತು.