ಉಡುಪಿ :ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಒಟ್ಟು 6 ತಜ್ಞ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸೆ. 20ರಂದು ಬೆಳಿಗ್ಗೆ 10: 30ರಿಂದ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಶೈಕ್ಷಣಿಕ ಮೂಲದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.