ಕಾಪು : ಸೆಪ್ಟೆಂಬರ್ 14: ದೃಶ್ಯ ನ್ಯೂಸ್ : 2004ರಲ್ಲಿ ಉಡುಪಿಯ ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಕುಂಬಳೆಯಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಉಜಿರೆ-ಲಾಯಿಲ ಗ್ರಾಮದ ನಿವಾಸಿ ಪ್ರಸ್ತುತ ಕೇರಳದ ಕುಂಬಳೆಯಲ್ಲಿ ವಾಸವಿರುವ ಮಣಿ ಯಾನೆ ಮಣಿಕಂಠ ಬಂಧಿತ ಆರೋಪಿಯಾಗಿದ್ದಾನೆ.
ಆತನನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆತನಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.