ಮಂಗಳೂರು: ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧವಿಲ್ಲ. ತನಿಖೆ ಆಗಿ ಸತ್ಯ ಹೊರ ಬರಲಿ ಎಂದರು.