ಬೆಂಗಳೂರು: ಸೆಪ್ಟೆಂಬರ್ 14: ದೃಶ್ಯ ನ್ಯೂಸ್ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರಾದ ಗೋವಿಂದ ಬಾಬು ಪೂಜಾರಿಯವರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಪ್ರಕರಣದ 5ನೇ ಆರೋಪಿ ನಾಯ್ಕ್ ನನ್ನು ಬೆಂಗಳೂರು ನಗರದ ಯಶವಂತಪುರ ಬಳಿ ವಶಕ್ಕೆ ಪಡೆದಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆ ಮುಂದುವರೆದಿದೆ.
ಪ್ರಕರಣದ 5ನೇ ಆರೋಪಿಯಾಗಿರುವ ಈತ , ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯನಂತೆ ನಟಿಸಿದ್ದ ಎನ್ನಲಾಗಿದೆ. ಈತ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ಚಿಕನ್ ಕಬಾಬ್ ತಯಾರಿಸುವ ಬೀದಿ ವ್ಯಾಪಾರಿಯಾಗಿದ್ದ ಎಂದು ಗೋವಿಂದ ಬಾಬು ಅವರು ದೂರಿನಲ್ಲಿ ತಿಳಸಿದ್ದಾರೆ.