ಕಾಪು : ಸೆ.14: ದೃಶ್ಯ ನ್ಯೂಸ್ : ಬೆಳಪು ಸರಕಾರಿ ಸಂಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡಮಾಡಿದ ಉಚಿತ ಸವಲತ್ತುಗಳಾದ ಶೂ & ಸಾಕ್ಸ್ ಅನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳಿಗೆ ವಿತರಿಸಿದರು.
ಬೆಳಪು ಸಂಯುಕ್ತ ಪ್ರೌಢಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಅಂಕ ಪಡೆಯಬೇಕು ಉತ್ತಮ ಶ್ರೇಣಿಯಲ್ಲಿ ಉತೀರ್ಣ ಕನಸು ಕಾಣುತ್ತಿರುತ್ತಾರೆ. ಅವರ ಕನಸು ನನಸಾಗದ ಸಂದರ್ಭದಲ್ಲಿ ಖಿನ್ನತೆಗೊಳ್ಳಲಾಗುತ್ತಾನೆ. ಇಂತಹ ಸಂದರ್ಭದಲ್ಲಿ ನಾವು ಅವರಿಗೆ ಆತ್ಮಸ್ಥೈರ್ಯವನ್ನು ತುಂಬಬೇಕು ಜೊತೆಗೆ ಅವರಲ್ಲಿನ ಕೌಶಲ್ಯ ವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದ ಅವರು ಸರಕಾರದ ಈ ಯೋಜನೆ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪ್ರತಿ ಮಗುವಿಗೂ ತಲುಪುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ, ದಾನಿಗಳಾದ ಮುಸ್ತಾಕ್ ಅಹಮದ್, ಬೆಳಪು ಅಂಬೇಡ್ಕರ್ ಸಮಿತಿಯ ಅಧ್ಯಕ್ಷರಾದ ಶಂಕರ್, ಬೆಳಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ನವೀನ್ ಡಿಸೋಜ, ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾದ ಮಲ್ಲಪ್ಪ ಬಿಜಗತ್ತಿ, ಶಾಲಾ ಅಭಿವೃದ್ಧಿ ಸಮಿತಿಯ ಪದನಿಮಿತ್ತ ಸದಸ್ಯರಾದ ಕೊರಗ, ಹಾಗೂ ಜಹೀರ್ ಅಹಮದ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಜನಿ ಕೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಆಶಾ ಕೆ ಉಪಸ್ಥಿತರಿದ್ದರು.