ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್ ಹಾಗೂ ಡಾ. ಎಂ.ಟಿ. ರೇಜು, ಸಾರಿಗೆ ಆಯುಕ್ತ ಎನ್.ವಿ.ಪ್ರಸಾದ್, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ನೋಂದಣಿ ಮಹಾ ಪರಿವೀಕ್ಷಕರಾದ ಮಮತ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
.