ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ಜಿಪಂ ಸಿಇಒ ಪ್ರಸನ್ನ ಎಚ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಭಾಗವಹಿಸಿದ್ದರು.