ಉಡುಪಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮವು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ., ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ಜಿಪಂ ಸಿಇಒ ಪ್ರಸನ್ನ ಎಚ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಳಾ ಮೊದಲಾದವರು ಉಪಸ್ಥಿತರಿದ್ದರು .