ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್, ಪೈಪ್ ಗಳನ್ನು ಕದ್ದ ಕಳ್ಳ ಪೊಲೀಸರ ಅತಿಥಿಯಾದ ಘಟನೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತನನ್ನು ಮೂಡಬಿದಿರೆ ನಿವಾಸಿ ಮಹಮ್ಮದ್ ಸಾಯಿಲ್ ( 21) ಎಂದು ಗುರುತಿಸಲಾಗಿದೆ. ಆರೋಪಿ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್ಗಳನ್ನು ಕಳವು ಮಾಡಿದ್ದ ಎನ್ನಲಾಗಿದೆ.
ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ ಜಿ ಕಳ್ಳತನ ಮಾಡಿದ ಒಂದನೇ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ಸುಮಾರು 2.50 ಲಕ್ಷ ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ವಶಕ್ಕೆ ಪಡಿಸಲಾಗಿದೆ.