ಕಾಪು : ಸೆಪ್ಟೆಂಬರ್ 16 ದೃಶ್ಯ ನ್ಯೂಸ್ : ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ಮೇ 2023ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಕಾಪುವಿನ ಪಾಂಡುರಂಗ ನಾಯಕ್ ಅವರಿಗೆ ಇಂದು ಸನ್ಮಾನ ಕಾರ್ಯಕ್ರಮ ನಡೆಯಿತು.
ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿಯವರು ಪಾಂಡುರಂಗ ನಾಯಕ್ ಅವರನ್ನು ಗೌರವಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಾಂಡುರಂಗ ನಾಯಕ್ ರವರಿಗೆ ತರಬೇತಿ ನೀಡಿದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ಉಡುಪಿ ಶಾಖೆಯ ಮಾಜಿ ಅಧ್ಯಕ್ಷ ಸಿಎ ನರಸಿಂಹ ನಾಯಕ್ ಉಪಸ್ಥಿತರಿದ್ದರು. ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.