ಕಾಪು : ಸೆ.16: ದೃಶ್ಯ ನ್ಯೂಸ್ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು ಭಾಗದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಜನರಿಗೆ ಹಕ್ಕುಪತ್ರ ನೀಡುವಲ್ಲಿ ಸಮಸ್ಯೆ ಉಂಟಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರಕಾರಿ ಜಮೀನಿನಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯವಿದ್ದು ಪಹಣಿಯಲ್ಲಿ ನದಿ ಪರಂಬೋಕು ಎಂದು ಉಲ್ಲೇಖಿಸಿರುವುದರಿಂದ ಇದನ್ನು ವಿರಹಿತಗೊಳಿಸಲು ಸರಕಾರ ಮಟ್ಟದಲ್ಲಿ ಪರಿಹರಿಸುವಂತೆ ಪ್ರಸ್ತಾವನೆ ಸಲ್ಲಿಸಿ ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬಿಜೆಪಿ ಮುಖಂಡರಾದ ಮಿಥುನ್ ಹೆಗ್ಡೆ ಹಾಗೂ ಸಹಾಯಕ ಆಯುಕ್ತರಾದ ರಶ್ಮಿ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಮತ್ತು ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.