ಉಡುಪಿ : ಸೆ.16: ದೃಶ್ಯ ನ್ಯೂಸ್ : ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನೇತೃತ್ವದಲ್ಲಿ “ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ” ಪೂರ್ವ ಸಿದ್ಧತಾ ಸಭೆ ಇಂದು ನಡೆಯಿತು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕರು ಭಾಗವಹಿಸಿದರು.
ಸಭೆಯಲ್ಲಿ ಮಾಜಿ ಸಚಿವರು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್, ಮಾಜಿ ಸಚಿವರು, ವಿಧಾನಸಭಾ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಹಿರಿಯರು, ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.