ಉಡುಪಿ: ದೃಶ್ಯ ನ್ಯೂಸ್ : ಸೆಪ್ಟೆಂಬರ್ 16 : ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಪರ್ಯಾಯ ಲಾಂಛನವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಸಮಿತಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್, ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣ, ಆನೆಗುಡ್ಡೆ ಸೂರ್ಯನಾರಾಯಣ ಉಪಾಧ್ಯಾಯ, ಶಾಸಕರಾದ ಯಶಪಾಲ್ ಸುವರ್ಣ, ಗುರುರಾಜ ಗಂಟೆಹೊಳೆ, ಕಿರಣ್ ಕೊಡ್ಡಿ ಮತ್ತು ಗುರ್ಮೆ ಸುರೇಶ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹೇರಂಜೆ ಕೃಷ್ಣ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ನಾಗೇಶ್ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಿನ್ನಿಗೋಳಿ ಯುಗಪುರುಷ ಭುವನಾಭಿರಾಮ ಉಡುಪ, ಮೂಡುಬಿದಿರೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಧನಲಕ್ಷ್ಮಿ ಶ್ರೀಪತಿ ಭಟ್, ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ್ ಉಪಸ್ಥಿತರಿದ್ದರು
ಮಠದ ದಿವಾನ ನಾಗರಾಜ ಆಚಾರ್ಯ ಸ್ವಾಗತಿಸಿದರು. ರಮೇಶ್ ಭಟ್ ನಿರೂಪಿಸಿದರು. ಪುತ್ತಿಗೆ ಮಠ ಆಡಳಿತಾಧಿಕಾರಿ ಪ್ರಸನ್ನ ಆಚಾರ್ಯ ವಂದಿಸಿದರು.