ಉಡುಪಿ : ಅರಬಿಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ ಪ್ರವೇಶದ ಮೇಲೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿಯವರ ಸೂಚನೆಯಂತೆ ಸೆ.25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.