ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರ್ಗಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಂತರ ಮಾತನಾಡಿದ ಅವರು, ‘ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು’ ಎಂದರು.
ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ಹೇಳಿದರು.
ಕಲಬುರಗಿ ಸೆ.17: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ (Kalyana Karnataka Vimochana Divas ) ಅಮೃತ ಮಹೋತ್ಸವ ಮತ್ತು ಸಂವಿಧಾನದ ಅನುಚ್ಛೇದ 371 (ಜೆ) ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಆಚರಿಸಲಾಗುತ್ತಿದೆ.
ನಂತರ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು