ಕಾಪು : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಇಂದು ಉಚಿತ ರಿಕ್ಷಾ ಪ್ರಯಾಣಕ್ಕೆ ಚಾಲನೆ ನೀಡಲಾಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಅವರು ಉಚಿತ ರಿಕ್ಷ ಪ್ರಯಾಣಕ್ಕೆ ಚಾಲನೆ ನೀಡಿ ಆಟೋದಲ್ಲಿ ಪ್ರಯಾಣಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್ ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.