ಬ್ರಹ್ಮಾವರ:ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು
ಆರ್ಯ ಈಡಿಗ ಸಮಾಜ ಸೋಲೂರು ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ ಯವರು ನೂತನ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿ ಆಶೀರ್ವಚಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶಾಸಕನ ನೆಲೆಯಲ್ಲಿ ಸಂಪೂರ್ಣ ಸಹಕಾರದ ಆಶಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ವಿವಿಧ ಗಣ್ಯರು ಉಪಸ್ಥಿತರಿದ್ದರು.