ಉಡುಪಿ :ಜಿಲ್ಲೆಯ ಒಟ್ಟು 470 ಸ್ಥಳಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ ತಿಳಿಸಿದ್ದಾರೆ.
ಈ ಸಂಬಂಧ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಲಾಗಿದ್ದು, ಸುಮಾರು 900 ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಮೂರು ಕೆಎಸ್ಆರ್ಪಿ ಮತ್ತು 8 ಜಿಲ್ಲಾ ಸಶಸ್ತ್ರ ಪಡೆ ತುಕಡಿಯನ್ನು ನಿಯೋಜಿಸಲಾಗುತ್ತದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ನೀಡಿದರು. ಇಲ್ಲ ಎಂದು ಅವರು ಮಾಹಿತಿ ನೀಡಿದರು.