ಸೆಪ್ಟೆಂಬರ್ 18:ದೃಶ್ಯ ನ್ಯೂಸ್: ಏಷ್ಯಾ ಕಪ್ ಕ್ರಿಕೆಟ್ ನ ಪೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿರುವ ಭಾರತ ತಂಡಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಸಚಿವರು ಭಾರತ ತಂಡಕ್ಕೆ ಇದು 8 ನೇ ಏಷ್ಯಾ ಕಪ್ ಟ್ರೋಪಿಯ ಗೆಲುವಾಗಿದ್ದು , ಬರಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳಿಗೆ ದಿಕ್ಸೂಚಿಯಾಗಲಿದೆ. ಭಾರತ ಕ್ರಿಕೆಟ್ ತಂಡದ ಪ್ರದರ್ಶನ ಹೀಗೆಯೇ ಮುಂದುವರೆಯಲಿ, ವಿಶ್ವಕಪ್ ನ್ನು ಸಹ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದರು.