ಹಿರಿಯಡ್ಕ : ಸೆಪ್ಟೆಂಬರ್ 18: ದೃಶ್ಯ ನ್ಯೂಸ್ : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯಡ್ಕ ಸಂತೆ ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾರುಕಟ್ಟೆಯಲ್ಲಿ ಸ್ವಚ್ಛತೆ ಬಗ್ಗೆ ಗಮನಹರಿಸಿ ಮತ್ತು ಮಾರುಕಟ್ಟೆಗೆ ಬರುವ ಗ್ರಾಹಕರರಿಗೆ ಅನುಕೂಲವ ನಿಟ್ಟಿನಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರರಾದ ಸುಭಾಸ್ ರೆಡ್ಡಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಪ್ರಮುಖರು, ಕಾರ್ಯಕರ್ತರು, ಉಪಸ್ಥಿತರಿದ್ದರು.