ಉಡುಪಿ : ಸೆಪ್ಟೆಂಬರ್ 18 : ದೃಶ್ಯ ನ್ಯೂಸ್ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರತ್ನ ನಗರದ ಮನೆ ಯೊಂದರಲ್ಲಿ ಲ್ಯಾಪ್ ಟಾಪ್ ಕಳ್ಳತನ ಪ್ರಕರಣ ನಡೆದಿದ್ದು ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ಎರಡು ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ.