ಬೆಂಗಳೂರು ಸೆ.19: ದೃಶ್ಯ ನ್ಯೂಸ್ : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ 3ನೇ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದರು. ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ.