ಕಾಪು : ಸೆಪ್ಟೆಂಬರ್ 19, ದೃಶ್ಯ ನ್ಯೂಸ್ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮಣಿಪುರ ವೆಸ್ಟ್ ಇದರ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ಅದ್ದೂರಿಯಾಗಿ ನಡೆಯಿತು. ಸಾರ್ವಜನಿಕ ಗಣೇಶೋತ್ಸವಕ್ಕೆ ಆಗಮಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿಘ್ನ ವಿನಾಶಕನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಬಳಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಣಿಪುರ ಬಡಗುಮನೆ ಬಿಂದು ಶೆಟ್ಟಿ, ಮಣಿಪುರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿಗಳಾದ ಸನತ್ ರಾಜ್ ಶೆಟ್ಟಿ, ಪುರೋಹಿತರಾದ ರವಿ ಸಾಮಗ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.