ಬೆಂಗಳೂರಿನ ಕೃಷಿಕ್ ಸರ್ವೋದಯ ಫೌಂಡೇಶನ್, ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ಇತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಮತ್ತು ತಮ್ಮ ಶಿಕ್ಷಣವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳು 2023-24 ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು
ಆಸಕ್ತರು ಕೃಷಿಕ್ ಸರ್ವೋದಯ ಫೌಂಡೇಶನ್, ನಂ 15, 2 ನೇ ಹಂತ, ಗಾಲ್ಫ್ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು – 560008 ಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 31. ವಿವರಗಳಿಗಾಗಿ, 080-25202299 ಗೆ ಕರೆ ಮಾಡಿ ಅಥವಾ ವೆಬ್‌ಸೈಟ್ www.ksfkarnataka.com ಗೆ ಭೇಟಿ ನೀಡಿ, ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.