ಕಾವೇರಿ ನದಿ ನೀರು ವಿವಾದ ಸಂಬಂದ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ಆರಂಭವಾಗಿದೆ.
ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು, ರಾಜ್ಯದ ಹಿತ ಕಾಪಾಡುವ ದೃಷ್ಟಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ನಿರ್ಧಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ಕಾವೇರಿ ವ್ಯಾಪ್ತಿಯ ಶಾಸಕರು, ಸಚಿವರು, ಕಾನೂನು ತಂಡ ಉಪಸ್ಥಿತರಿದ್ದಾರೆ.