ಉಡುಪಿ : 20 ಸೆಪ್ಟೆಂಬರ್ : ದೃಶ್ಯ ನ್ಯೂಸ್ : ಶ್ರೀಮತಿ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಉದ್ಘಾಟನಾ ಸಮಾರಂಭ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ವಿ.ಕೆ ಗ್ರೂಪ್ ಆಫ್ ಕಂಪೆನೀಸ್ ಚೇರ್ ಮ್ಯಾನ್ ಕೆ.ಎಂ ಶೆಟ್ಟಿ, ರಮೇಶ್ ನಾಯಕ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಶ್ರೀಮತಿ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿಗಳಾದ ವಿ.ಜಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.