ಉಡುಪಿ ಜಿಲ್ಲೆಯ ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾ ಯತ್ ವ್ಯಾಪ್ತಿ ಯಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸ್ವಚ್ಛತಾ ಹೀ ಸೇವೆ ಆಂದೋಲನದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಭೇಟಿ ನೀಡಿ, ತ್ಯಾಜ್ಯ ಸಂಗ್ರಹಣೆ ಹಾಗೂ ಸಮರ್ಪಕ ವಿಲೇವಾರಿ ಮಾಡುವ ಘಟಕದ ಪರೀಕ್ಷಣೆ ನಡೆಸಿದರು
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಕೆ, ಕಾಪು ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.