ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಇಂದು ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಭೇಟಿ ಮಾಡಿ ಚರ್ಚಿಸಿದರು.
ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು