ಬೆಂಗಳೂರು: ಸೆಪ್ಟೆಂಬರ್ 22: ದೃಶ್ಯ ನ್ಯೂಸ್ : ಕಂಬಕ್ಕೆ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ವರದಿಯಾಗಿದೆ.
ಶುಕ್ರವಾರ ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಮನಮೋಹನ್ (31) ಹಾಗೂ ನಿಖಿಲ್ (25) ಎಂದು ಗುರುತಿಸಲಾಗಿದೆ.
ಯುವಕರು ಬಿಎಂಡಬ್ಲ್ಯೂ ಬೈಕ್ ಚಲಾಯಿಸುತ್ತಿದ್ದರು. ಯಶವಂತಪುರದಿಂದ ಆರ್‌ಎಮ್‌ಸಿ ಯಾರ್ಡ್ ರಸ್ತೆ ಕಡೆ ಬರುತ್ತಿದ್ದ ವೇಳೆ ಅತಿವೇಗದಿಂದ ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು ಒಮ್ಮೆಲೇ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತ ಸಂಭವಿಸ್ತಾ ಪರಿಣಾಮ ಇಬ್ಬರೂ ಬೈಕ್‌ನಿಂದ ದೂರಕ್ಕೆ ಹಾರಿಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.