ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರ ವಲಯ ಹಾಗೂ ಗ್ರಾಮ ಪಂಚಾಯತ್ ವಾರಂಬಳ್ಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮಆಯೋಜಿಸಲಾಗಿತ್ತು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಅರಿವು ಮೂಡಿಸುವ ಕಾರ್ಯಕ್ರಮದ ಆಯೋಜನೆಯ ಬಗ್ಗೆ ಅಭಿನಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಜನಜಾಗೃತಿ ವೇದಿಕೆಯ ಬ್ರಹ್ಮಾವರ ವಲಯದ ಅಧ್ಯಕ್ಷರಾದ ಶ್ರೀ ರಾಜೀವ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಬಿ. ಆರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.