ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಮಕ್ಕಳ ಎರಡು ಶಾಲೆಗಳಿಗೆ ಇಲ್ಲಿನ ಎಂಆರ್ಪಿಎಲ್ ಸಂಸ್ಥೆಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ, ಒಟ್ಟು ₹45.41 ಲಕ್ಷ ಮೊತ್ತದ ಎರಡು ಶಾಲಾ ಬಸ್ಗಳನ್ನು ದೇಣಿಗೆಯಾಗಿ ನೀಡಿದೆ
ಉಡುಪಿ ಜಿಲ್ಲೆಯ ಕಾರ್ಕಳದ ಚೇತನಾ ವಿಶೇಷ ಮಕ್ಕಳ ಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಬಸ್ಗಳನ್ನು ನೀಡಲಾಗಿದೆ. ಒಟ್ಟಾರೆ 165 ವಿದ್ಯಾರ್ಥಿಗಳು ಇದರ ಲಾಭ ಪಡೆಯಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.