ಬೆಂಗಳೂರು: ಕೋಳಿ ಸಾಕಾಣಿಕಯು ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶಿಸಿದೆ.
ಕೃಷಿ ಜಮೀನಿನಲ್ಲಿ ನಿರ್ಮಿಸಿದ ಕೋಳಿ ಸಾಗಾಣೆ ಕೇಂದ್ರಕ್ಕೆ ತೆರಿಗೆ ಪಾವತಿಸಲು ಸೂಚಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮ ಪಂಚಾಯತಿ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಕೆ.ನರಸಿಂಹ ಮೂರ್ತಿ ಎಂಬುವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಅಲ್ಲದೆ, ಕೋಳಿ ಸಾಕಣಿಕೆಯು ವಾಣಿಜ್ಯ ಚಟುವಟಿಕೆಯಾಗಿದ್ದು, ಅದಕ್ಕಾಗಿ ನಿರ್ಮಿಸಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ನಿರಾಕ್ಷೇಪಣಾ ಪತ್ರ (NOC) ವಿತರಿಸಲು 1.3 ಲಕ್ಷ ರು. ತೆರಿಗೆ ಪಾವತಿಸುವಂತೆ ಅರ್ಜಿದಾರರಿಗೆ ಸೂಚಿಸಿ ಗ್ರಾಮಪಂಚಾಯತಿ ಜಾರಿಗೊಳಿಸಿದ್ದ ನೋಟಿಸ್ ಅನ್ನು ಕರ್ಮಾಟಕ ಹೈಕೋರ್ಟ್ ಇದೇ ವೇಳೆ ರದ್ದುಪಡಿಸಿದೆ