ಕಾರ್ಕಳ: ಸೆಪ್ಟೆಂಬರ್ 23: ದೃಶ್ಯ ನ್ಯೂಸ್ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದರು.
ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನ್ನು ಪ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.