ಬಂಟ್ವಾಳ: ಸೆಪ್ಟೆಂಬರ್ 24: ದೃಶ್ಯ ನ್ಯೂಸ್ : ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಸೆ.24ರ ಭಾನುವಾರ ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯ ಬಳಿ ನಡೆದಿದೆ.
ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಮೃತಪಟ್ಟ ದುರ್ದೈವಿ. ರಾಜ್ ಕುಮಾರ್ ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು, ಕೃಷಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ವಾಮದಪದವಿನ ಮನೆಯಿಂದ ಸಜೀಪದಲ್ಲಿರುವ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿಯಾಗಿ ಈ ಧಾರುಣ ಘಟನೆ ಸಂಭವಿಸಿದೆ.