ಕಾಪು : ಸೆಪ್ಟೆಂಬರ್ 24: ದೃಶ್ಯ ನ್ಯೂಸ್ : ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ “ಚಾತುರ್ಮಾಸ್ಯ ವ್ರತಾಚರಣೆ” ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ನಡೆಯುತ್ತಿದೆ
ಇಲ್ಲಿಗೆ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸಚಿವರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಅಧ್ಯಕ್ಷಾದ ಶ್ರೀಧರ ಆಚಾರ್ಯ ವಡೇರ ಹೊಬಳಿ, ಮಾತೃ ಮಂಡಳಿ ಅಧ್ಯಕ್ಷರಾದ ಸಂಧ್ಯಾ ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.