ಕಡಬ: ಚಲಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ವ್ಯಕ್ತಿಯೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಡಬ ಅಂಚೆ ಕಚೇರಿ ಬಳಿ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದಿದೆ. ಕಡಬ ಸಮೀಪದ ಕಳಾರ ಕುದ್ಕೊಳಿ ನಿವಾಸಿ ಅಚ್ಚುತ ಗೌಡ (63) ಮೃತ ದುರ್ದೈವಿ.
ಕಡಬದಿಂದ ಬಸ್ ಏರಿ ಮನೆಯ ಕಡೆ ಹೊರಟಿದ್ದರು. ತಿರುವಿನಲ್ಲಿ ಆಯತಪ್ಪಿ ಕೆಳಕ್ಕೆ ಎಸೆಯಲ್ಪಟ್ಟಿದ್ದಾರೆ. ಅವರೊಂದಿಗೆ ಬಲ್ಯದ ಚಂದ್ರ ಶೇಖರ ಎಂಬವರೂ ಕೆಳಕ್ಕೆ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದರೆ ತೀವೃ ಗಾಯಗೊಂಡ ಅಚ್ಚುತ ಗೌಡ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಮೃತರು ಮೂಲತ ಪೆರಾಬೆ ಗ್ರಾಮದ ಬೀರಂತಡ್ಕ ನಿವಾಸಿ. ಇವರು ಕಳಾರದಲ್ಲಿ ಭೂಮಿ ಖರೀದಿಸಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ